Monday, May 13, 2024
HomeUncategorizedಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರ ತಯಾರಿಸಿಕೊಟ್ಟ ಕುಂದಾಪುರದ ಉದ್ಯಮಿ ಆನಂದ್‌ ಪೂಜಾರಿ

ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರ ತಯಾರಿಸಿಕೊಟ್ಟ ಕುಂದಾಪುರದ ಉದ್ಯಮಿ ಆನಂದ್‌ ಪೂಜಾರಿ

spot_img
- Advertisement -
- Advertisement -

ಕುಂದಾಪುರ: ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರ ತಯಾರಿಸಿಕೊಡುವ ಮೂಲಕ  ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೊಟೇಲ್‌ ಉದ್ಯಮಿ ಆನಂದ್‌ ಪೂಜಾರಿ ಕರಾವಳಿಗರು ಹೆಮ್ಮೆ ಪಡುವಂತೆ ಮಾಡಿದ್ದಾರೆ.

ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಾಸ್ತವ್ಯವಿದ್ದ ಪ್ರಧಾನಿ ಮೋದಿಯವರಿಗೆ ಮೂರು ದಿನ ಆಲೂರು ಆನಂದ ಪೂಜಾರಿ ಅವರು  ಊಟೋಪಚಾರದ ನೇತೃತ್ವ ವಹಿಸಿದ್ದರು.  ಆ ಮೂಲಕ ಆನಂದ್‌ ಅವರು ಮೋದಿ ಅವರಿಗೆ ಐದನೇ ಬಾರಿಗೆ ಊಟದ ಆತಿಥ್ಯದ ಜವಾಬ್ದಾರಿ ನೋಡಿಕೊಂಡ ಹಿರಿಮೆ ಅವರದ್ದಾಗಿದೆ.

ವಾಷಿಂಗ್ಟನ್‌ ಡಿಸಿಯಲ್ಲಿ 35 ವರ್ಷಗಳಿಂದ ನೆಲೆಸಿರುವ ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ದಂಪತಿ 25 ವರ್ಷಗಳಿಗೂ ಹೆಚ್ಚು ಕಾಲದಿಂದ ವುಡ್‌ಲ್ಯಾಂಡ್ಸ್‌ ಹೊಟೇಲನ್ನು ನಡೆಸುತ್ತಿದ್ದಾರೆ. ಇವರು ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯ ನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ.

ವಾಷಿಂಗ್ಟನ್‌ ಡಿಸಿಯಲ್ಲಿಯೇ ಇವರ ಹೊಟೇಲ್‌ ಇರುವುದರಿಂದ ಭಾರತದಿಂದ ಅಮೆರಿಕಕ್ಕೆ ಕೇಂದ್ರ ಸಚಿವರ ಸಹಿತ ಗಣ್ಯರು ಭೇಟಿ ನೀಡಿದರೆ, ಅವರಿಗೆಲ್ಲ ಆತಿಥ್ಯ ಇವರದೇ ಆಗಿದೆ.

ಇನ್ನು 2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾದ್ದರಿಂದ ಮೊದಲ ದಿನ ರಾತ್ರಿಯೂಟಕ್ಕೆ ಸಿರಿಧಾನ್ಯಗಳದ್ದೇ ಬಿಸಿಬೇಳೆ ಬಾತ್‌ ಮಾಡಿದ್ದರು. ಉಳಿದಂತೆ ಮೋದಿಯವರು ಗುಜರಾತಿ ಶೈಲಿಯಲ್ಲಿ ಕಿಚಡಿ, ಢೋಕ್ಲಾ, ಹಸಿ ಅಥವಾ ಬೇಯಿಸಿದ ತಾಜಾ ತರಕಾರಿಗಳು, ಹಣ್ಣುಗಳು ಇತ್ಯಾದಿಯನ್ನಷ್ಟೇ ಬಯಸುವುದರಿಂದ ಮತ್ತು ದ. ಭಾರತೀಯ ವಿಶೇಷಗಳಾದ ಇಡ್ಲಿ-ಚಟ್ನಿ, ವಡೆ-ಸಾಂಬಾರ್‌ ಸಹ ಅವರಿಗೆ ಇಷ್ಟವೇ ಆದ್ದರಿಂದ, ಪುನರಾವರ್ತನೆ ಆಗದಂತೆ ನೋಡಿಕೊಂಡು ಶುದ್ಧ ಸಸ್ಯಹಾರ ಆಹಾರವನ್ನೇ ಒದಗಿಸಿದ್ದಾರೆ. “ತರಕಾರಿಗಳೆಲ್ಲ ಭಾರತದವೇ ಆಗಬೇಕೆಂದು ಎಲ್ಲೆಲ್ಲಿಂದ ಹುಡುಕಿ ತರುವ ಕಷ್ಟ ತಗೋಬೇಡಿ. ಸ್ಥಳೀಯವಾಗಿ ಬೆಳೆದ, ಇದುವರೆಗೆ ನನಗೆ ಅಪರಿಚಿತ ತರಕಾರಿಗಳಿದ್ದರೆ ದಯವಿಟ್ಟು ಅವುಗಳನ್ನೇ ಬಳಸಿ” ಎಂದು ಮೋದಿಯವರು ಸೂಚನೆ ಕೊಟ್ಟಿದ್ದರು ಎನ್ನಲಾಗಿದೆ.

- Advertisement -
spot_img

Latest News

error: Content is protected !!