Monday, May 20, 2024
Homeಕರಾವಳಿಕಾಸರಗೋಡುಕಾಸರಗೋಡು ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇಗುಲದ ದೈವೀ ಸ್ವರೂಪಿ ಮೊಸಳೆ ಬಬಿಯಾ ದೈವೈಕ್ಯ

ಕಾಸರಗೋಡು ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇಗುಲದ ದೈವೀ ಸ್ವರೂಪಿ ಮೊಸಳೆ ಬಬಿಯಾ ದೈವೈಕ್ಯ

spot_img
- Advertisement -
- Advertisement -

ಕಾಸರಗೋಡು: ಇಲ್ಲಿನ ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರ ಪಾಲಕನಂತಿದ್ದ ದೈವೀ ಸ್ವರೂಪಿ ಮೊಸಳೆ ʼಬಬಿಯಾ ದೈವೈಕ್ಯವಾಗಿದೆ. ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.

ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ ದೇವರ ಮೊಸಳೆ ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ಹಲವಾರು ದೇವಸ್ಥಾನಗಳಲ್ಲಿ ದೇವರ ಆನೆ, ಬಸವ ಇತ್ಯಾದಿ ಪ್ರಾಣಿಗಳಿಗಳಿರುತ್ತದೆ. ಆದರೆ ಈ ದೇವಾಲದ ಕೆರೆಯ ನಡುವಿನಲ್ಲಿ ನೆಲೆಸಿರುವ ಅನಂತಪದ್ಮಾನಾಭನಿಗೆ ಮೊಸಳೆ-ಬಬಿಯಾ ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇತ್ತು. ವರ್ಷದ ಎಲ್ಲಾ ದಿನವೂ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯಲ್ಲಿ ಈ ಮೊಸಳೆಯೂ ಕೂಡ ವಾಸವಾಗಿತ್ತು. ದೇವರ ನೈವೇದ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿತ್ತು. ಹಾಗೆಂದು ಇದುವರೆಗೂ ಯಾರಿಗೂ ನೋವನ್ನುಂಟ ಉದಾಹರಣೆಗಳಿಲ್ಲ. ಇದೀಗ ಬಬಿಯಾ ಅಗಲಿರೋದು ಭಕ್ತರಲ್ಲಿ ತೀವ್ರ ಬೇಸರ ಮೂಡಿಸಿದೆ.

- Advertisement -
spot_img

Latest News

error: Content is protected !!