Thursday, July 16, 2026
Homeತಾಜಾ ಸುದ್ದಿಹಿರಿಯ ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆ

ಹಿರಿಯ ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆ

- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಅವ್ರು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಲಿದ್ದಾರೆ . ಆದರೆ ನಟ ಅನಂತ್ ನಾಗ್ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಬಿಜೆಪಿ ಸೇರ್ಪಡೆಯನ್ನು ಸದ್ಯಕ್ಕೆ ಮುಂದೂಡಿದ್ದಾರೆ ಎನ್ನಲಾಗಿದೆ. ಕೊನೇ ಕ್ಷಣದಲ್ಲಿ ನಟ ಅನಂತ್ ನಾಗ್ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

- Advertisement -

Latest News

error: Content is protected !!