Thursday, June 25, 2026
Homeಕರಾವಳಿಕೊನೆಗೂ ಅನುಶ್ರೀ ಮದುವೆ ಯಾವಾಗ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ತು; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆಂಕರ್...

ಕೊನೆಗೂ ಅನುಶ್ರೀ ಮದುವೆ ಯಾವಾಗ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ತು; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆಂಕರ್ ಅನುಶ್ರೀ

- Advertisement -
- Advertisement -

ಬೆಂಗಳೂರು;ಆಂಕರ್ ಅನುಶ್ರೀ ಎಲ್ಲೇ ಹೋದ್ರು ಅವರನ್ನು ಅಬಿಮಾನಿಗಳು ಕೇಳುತ್ತಿದ್ದ ಒಂದೇ ಒಂದು ಪ್ರಶ್ನೆ ಅಂದ್ರೆ ನಿಮ್ಮ ಮದ್ವೆ ಯಾವಾಗ ಅಂತಾ.. ಕೊನೆಗೂ ಆ ಪ್ರಶ್ನೆಗೆ ಅನುಶ್ರೀ ಇವತ್ತು ಉತ್ತರ ಕೊಟ್ಟಿದ್ದಾರೆ. ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ಉದ್ಯಮಿ ರೋಷನ್ ಅವರನ್ನು ಅನುಶ್ರೀ ವರಿಸಿದ್ದಾರೆ.ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ.

ಇನ್ನೂ, ನಿರೂಪಕಿ ಅನುಶ್ರೀ ಹಾಗೂ ರೋಷನ್​ ಅದ್ಧೂರಿ ಮದುವೆಗೆ ರಾಜ್​ ಬಿ ಶೆಟ್ಟಿ, ನೆನಪಿರಲಿ ಪ್ರೇಮ್, ಕಾವ್ಯ ಶಾ, ಸೋನಲ್ ಮೊಂಥೆರೋ, ನಟ ನಾಗಭೂಷಣ್, ಚೈತ್ರಾ ಜೆ ಆಚಾರ್, ನಟ ಶರಣ್​ ಸೇರಿದಂತೆ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ. 

- Advertisement -

Latest News

error: Content is protected !!