- Advertisement -
![]()
- Advertisement -
ಬೆಂಗಳೂರು; ಬಿಗ್ ಬಾಸ್ ಖ್ಯಾತಿಯ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೇಂದ್ರ ಸಚಿವ, ಜೆಡಿಎಸ್ ಪ್ರಮುಖ ನಾಯಕ ಹೆಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜಾಹ್ನವಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಪಿಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಪಕ್ಷದ ಧ್ವಜ ನೀಡಿ ಸ್ವಾಗತ ಮಾಡಿದ್ದಾರೆ.
ಜಾಹ್ನವಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ,ಶೈಲಜಾ ರಾವ್ ಉಪಸ್ಥಿತರಿದ್ದರು. ಇದೇ ವೇಳೆ ಜೆಡಿಎಸ್ ಮಹಿಳಾ ಘಟಕವನ್ನು ಮತ್ತಷ್ಟು ಬಲಪಡಿಸಲು ಹೆಚ್‌ಡಿ ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದಾರೆ. ಇದರ ಹಿನ್ನಲೆಯಲ್ಲಿ ಪ್ರಮುಖ ಮಹಿಳೆಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ಲಾನ್ ರೂಪಿಸಿದೆ ಎನ್ನಲಾಗಿದೆ.
- Advertisement -


