Saturday, June 6, 2026
Homeತಾಜಾ ಸುದ್ದಿಧಾರಾವಾಹಿಗೆ ಅನಿರುದ್ಧ್​ ವಾಪಸ್​ ಬರಬೇಕು: ಆ ಮೂಲಕ ನ್ಯಾಯ ಸಿಗಬೇಕು: ಅಭಿಮಾನಿಗಳ ಒತ್ತಾಯ

ಧಾರಾವಾಹಿಗೆ ಅನಿರುದ್ಧ್​ ವಾಪಸ್​ ಬರಬೇಕು: ಆ ಮೂಲಕ ನ್ಯಾಯ ಸಿಗಬೇಕು: ಅಭಿಮಾನಿಗಳ ಒತ್ತಾಯ

- Advertisement -
- Advertisement -

ಬೆಂಗಳೂರು: ಖಾಸಗೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ವಿವಾದ ಸದ್ಯಕ್ಕೆ ಬಗೆಹರಿಯುವಂತೆ ಕಾಣ್ತಿಲ್ಲ. ಇದೀಗ ಅನಿರುದ್ಧ್ ಅವರ ಮಹಿಳಾ ಅಭಿಮಾನಿಗಳು ಆರೂರು ಜಗದೀಶ್ ವಿರುದ್ಧ ಗರಂ ಆಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಧಾರಾವಾಹಿಯಿಂದ ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಅಭಿಮಾನಿಗಳು ಧ್ವನಿ ಎತ್ತಿದ್ದಾರೆ. ಧಾರಾವಾಹಿ ತಂಡದಲ್ಲಿ ಮನಸ್ತಾಪ ಆದಾಗ ಅದನ್ನು ಅವರೇ ಒಳಗೆ ಬಗೆಹರಿಸಿಕೊಳ್ಳಬೇಕು. ಅದರ ಬದಲು ಸಾರ್ವಜನಿಕವಾಗಿ ಮಾತನಾಡಬಾರದಿತ್ತು’ ಎಂದು ಅನಿರುದ್ಧ್ ಅವರ ಮಹಿಳಾ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಅನಿರುದ್ಧ್ ಅವರ ಮಹಿಳಾ ಅಭಿಮಾನಿಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಧಾರಾವಾಹಿಗೆ ಅನಿರುದ್ಧ್ ವಾಪಸ್ ಬರಬೇಕು. ಆ ಮೂಲಕ ನ್ಯಾಯ ಸಿಗಬೇಕು’ ಎಂದು ಫ್ಯಾನ್ಸ್ ಒತ್ತಾಯಿಸಿದ್ದಾರೆ. ಬಹಿಷ್ಕಾರ ಮಾಡಿದ್ದರಲ್ಲಿ ದುರುದ್ದೇಶ ಕಾಣುತ್ತಿದೆ. ಬೇರೆ ಕಲಾವಿದರು ಧ್ವನಿ ಎತ್ತಿದರೆ ಅವರಿಗೂ ಹೀಗೆಯೇ ಆಗಲಿದೆ ಎಂಬಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!