Friday, June 5, 2026
Homeಕರಾವಳಿಮಂಗಳೂರು:ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿ ಯುವತಿಗೆ ವಂಚನೆ; ಕಡಬ ಮೂಲದ ಆರೋಪಿಯ ಬಂಧನ

ಮಂಗಳೂರು:ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿ ಯುವತಿಗೆ ವಂಚನೆ; ಕಡಬ ಮೂಲದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿ ಯುವತಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡಬ ಮೂಲದ ಆರೋಪಿಯನ್ನು ಮಂಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನೀಶ್ ರೆಹಮಾನ್ ಬಂಧಿತ ಆರೋಪಿ.

 ಅನೀಶ್ ರೆಹಮಾನ್ ಹಾಗೂ ಸಂತ್ರಸ್ತೆ ಯುವತಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಪ್ರೀತಿಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ . ಈ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಜೂನ್ 26 ರಂದು ಲಿಖಿತ ದೂರು ದಾಖಲಿಸಿದ್ದರು.

ಆರೋಪಿಯು ಮದುವೆಯಾಗುವುದಾಗಿ ಭರವಸೆ ನೀಡಿ ನಗರದ ಖಾಸಗಿ ಲಾಡ್ಜ್ ಗೆ ಕರೆದೊಯ್ದಿದ್ದ. 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ಆಕೆ ಹೇಳಿಕೆ ನೀಡಿದ್ದಾಳೆ. ನಂತರ ಆರೋಪಿಗೆ ಈಗಾಗಲೇ ಮದುವೆಯಾಗಿರುವುದು ಸಂತ್ರಸ್ತೆಗೆ ಗೊತ್ತಾಗಿ, ಮನೆಯವರಿಗೆ ವಿಷಯ ತಿಳಿಸಿದ್ದಾಳೆ.

ಇದೀಗ ಅನೀಶ್ ರೆಹಮಾನ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 506, 417 ಹಾಗೂ 376 ರಡಿ ಕೇಸು ದಾಖಲಿಸಿ ಜೂನ್ 26 ರಂದು ಬಂಧಿಸಲಾಗಿದೆ. 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇನ್ನು ಆರೋಪಿ ರೆಹಮಾನ್ ಈ ಹಿಂದೆ ಗಾಂಜಾ ಸೇವನೆ ಕೇಸ್​ನಲ್ಲಿ ಬಂಧಿತನಾಗಿದ್ದ. ಇದು ಕಾವೂರು ಠಾಣಾ ವ್ಯಾಪ್ತಿಗೆ ಸೇರಿದ್ದ ಪ್ರಕರಣವಾಗಿದೆ. ಇದರಲ್ಲಿ ಆತ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿದ್ದಾನೆ.

- Advertisement -

Latest News

error: Content is protected !!