Sunday, June 7, 2026
Homeಕರಾವಳಿಉಡುಪಿಉಡುಪಿ: ಅನಿಶಾ ಪೂಜಾರಿ ಕೊಲೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ

ಉಡುಪಿ: ಅನಿಶಾ ಪೂಜಾರಿ ಕೊಲೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ

- Advertisement -
- Advertisement -

ಉಡುಪಿ: ಅನಿಶಾ ಪೂಜಾರಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಹೈ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಯ್ಬರಕಟ್ಟೆ ಎಂಬಿಎ ಪದವೀಧರೆ ಅನಿಶಾ ಸಾವು ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಎಂದು ಮೃತ ಯುವತಿ ತಾಯಿ ಹೈ ಕೋರ್ಟಿಗೆ ರಿಟ್ ಸಲ್ಲಿಸಿದ್ದಾರೆ.

ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿಯ ಅಸಹಜ ಸಾವಿನ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಆರೋಪಿ ಚೇತನ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಅನಿಶಾ ಪೂಜಾರಿಯ ಸಾವಿಗೆ ಸಂಬಂಧಿಸಿದಂತೆ ದೊರಕಿರುವ ಸಾಕ್ಷ್ಯ ಮತ್ತು ದೃಶ್ಯ ಚಿತ್ರದಿಂದ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಕುಟುಂಬಸ್ಥರು ಭಾವಿಸಿದ್ದರು.

ಇದೀಗ ಅನಿಶಾ ಪೂಜಾರಿ ಸಾವಿನ ಕುರಿತು ಬಹಳಷ್ಟು ಸಂಶಯ ಮೂಡಿ ಬಂದಿರುವುದರಿಂದ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಲಾಗುತ್ತಿದೆ. ಹೀಗಾಗಿ ಹೈ ಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

‘ಆರೋಪಿ ಚೇತನ್ ಶೆಟ್ಟಿ ಅನಿಶಾಳನ್ನು ಹಲವು ವರ್ಷದಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ ಬೇರೆ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸುತ್ತಿದ್ದ. ಇದರಿಂದ ಮನನೊಂದ ಈಕೆ ಆತ್ಮಹತ್ಯೆ ಮಾಡಿದ್ದಳು’ ಎಂಬ ಡೆತ್ನೋಟ್ ಆಧಾರದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ವೇದಿಕೆ ನೇತೃತ್ವದಲ್ಲಿ ಬಿಲ್ಲವ ಸಂಘಟನೆಗಳ ಸಹಕಾರದೊಂದಿಗೆ ಹೋರಾಟ ನಡೆದಿತ್ತು. ಆರೋಪಿಯನ್ನು ಕೆಲ ದಿನಗಳ ಹಿಂದೆ ಬೆಂಗಳೂರಿನ ವಿಜಯನಗರದ ಮನೆಯೊಂದರಲ್ಲಿ ಬಂಧಿಸಿದ್ದರು.

- Advertisement -

Latest News

error: Content is protected !!