Wednesday, June 24, 2026
Homeತಾಜಾ ಸುದ್ದಿನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಟ್ವೀಟ್ ಮೂಲಕ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಟ್ವೀಟ್ ಮೂಲಕ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಅನಿತಾ ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ವದಂತಿಗಳು ಹರಿದಾಡುತ್ತಿದ್ದವು. ಇದೀಗ ಈ ಬಗ್ಗೆ ಅನಿತಾ ಕುಮಾರಸ್ವಾಮಿ ಅವರೇ  ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದಿದ್ದಾರೆ.

ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ಶ್ರೀ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಮತ್ತು ಹೆಚ್.ಡಿ.ದೇವೇಗೌಡ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. ಆ ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.

- Advertisement -

Latest News

error: Content is protected !!