Tuesday, May 14, 2024
Homeತಾಜಾ ಸುದ್ದಿಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಅಕ್ಕಿ ಬದಲು ಹಣ ನೀಡೋ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಅಕ್ಕಿ ಬದಲು ಹಣ ನೀಡೋ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

spot_img
- Advertisement -
- Advertisement -

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಅಕ್ಕಿ ಬದಲು ಹಣ ನೀಡೋ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ. ಡಿ.ಸಿಎ ಡಿ.ಕೆ ಶಿವಕುಮಾರ್‌ ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಹಾಜರಿದ್ದರು. ಇನ್ನೂ ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣವರ್ಗಾವಣೆಯಾಗಲಿದೆ. ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ.

ಯೋಜನೆ ಜಾರಿಯಾದ ದಿನದಿಂದ 10 ದಿನಗಳೊಳಗೆ ಎಲ್ಲ ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿಯಾಗಲಿದೆ. ಪಡಿತರ ಕುಟುಂಬದ ಯಜಮಾನ ಅಥವಾ ಯಜಮಾನಿಯ ಖಾತೆಗೆ ಹಣ ಬಿಡುಗಡೆಯಾಗಲಿದೆ. ರಾಜ್ಯದಲ್ಲಿ 10,89,899 ಅಂತ್ಯೋದಯ ಕಾರ್ಡುಗಳಿದ್ದು ಒಟ್ಟು 44,84,178 ಮಂದಿ ಫಲಾನುಭವಿಗಳು ಹಾಗೂ 1,17,41,561 ಬಿಪಿಎಲ್‌ ಕಾರ್ಡುಗಳಿದ್ದು, 3,97,64,489 ಮಂದಿ ಫಲಾನುಭವಿಗಳಿದ್ದಾರೆ. ಒಟ್ಟು 4.42 ಕೋಟಿಗೂ ಅಧಿಕ ಫಲಾನುಭವಿಗಳು ಹಣ ಪಡೆದುಕೊಳ್ಳಲಿದ್ದಾರೆ.

ಇದೇ ವೇಳೆ ಅವರು ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ. ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಅಂತ ಟ್ವೀಟ್‌ ಮಾಡಿದ್ದಾರೆ.

- Advertisement -
spot_img

Latest News

error: Content is protected !!