Tuesday, June 23, 2026
Homeತಾಜಾ ಸುದ್ದಿಬಿಜೆಪಿಗೆ ರಾಜೀನಾಮೆ ಘೋಷಿಸಿದ ಅಣ್ಣಾಮಲೈ

ಬಿಜೆಪಿಗೆ ರಾಜೀನಾಮೆ ಘೋಷಿಸಿದ ಅಣ್ಣಾಮಲೈ

- Advertisement -
- Advertisement -

ನವದೆಹಲಿ; ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಮಾಜಿ ಅಧ್ಯಕ್ಷ ಅಣ್ಣಾಮಲೈ ರಾಜೀನಾಮೆ ಘೋಷಣೆ ಮಾಡಿದ್ದಾರೆ.

ದೆಹಲಿಯಲ್ಲಿ ಅಣ್ಣಾಮಲೈ ಅವರು ಬಿಜೆಪಿ ವರಿಷ್ಠರನ್ನ ಭೇಟಿಯಾಗಿದ್ದು ಈ ವೇಳೆ ವರಿಷ್ಠರ ಮನವೊಲಿಕೆ ವಿಫಲವಾಗಿದೆ.  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರಿಗೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈ ಮೂಲಕ  ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಜೂನ್ 4 ರಂದು ತಮ್ಮ ಹುಟ್ಟುಹಬ್ಬದಂದು ಅಣ್ಣಾಮಲೈ ಮುಂದಿನ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಣ್ಣಾಮಲೈ ಈ ಹಿಂದೆ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.

- Advertisement -

Latest News

error: Content is protected !!