Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಶವಗಳನ್ನು ಹೂತು ಹಾಕಿದ ಪ್ರಕರಣ; ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರಿಂದ ಪ್ರಕಟಣೆ...

ಬೆಳ್ತಂಗಡಿ : ಹಲವಾರು ಶವಗಳನ್ನು ಹೂತು ಹಾಕಿದ ಪ್ರಕರಣ; ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರಿಂದ ಪ್ರಕಟಣೆ ಬಿಡುಗಡೆ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ.ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರಾದ ಕೆ. ಪಾರ್ಶ್ವನಾಥ್ ಜೈನ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

- Advertisement -

Latest News

error: Content is protected !!