Thursday, June 4, 2026
Homeಕರಾವಳಿಉಡುಪಿಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ ; ದೇವಿಯ ವಾರ್ಷಿಕ...

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ ; ದೇವಿಯ ವಾರ್ಷಿಕ ಮಹೋತ್ಸವ ಶುಕ್ರವಾರದಿಂದ ಆರಂಭ

- Advertisement -
- Advertisement -

ಬೆಳಗಾವಿ: ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ ಮೇ 16, 17,18 ರಂದು ನಡೆಯಲಿದೆ.ಉಡುಪಿ ಜಿಲ್ಲೆ ಉಚ್ಚಿಲದ ವಿಶ್ವನಾಥ ಜೋಯಿಸರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಲಿದೆ.ಮೇ 16 ರಂದು ಸಂಜೆ 6 ಕ್ಕೆ ಪ್ರಾರ್ಥನೆ, ವಾಸ್ತು ಶುದ್ದಿ, ವಾಸ್ತು ಹೋಮ, 7 ಕ್ಕೆ ಸಾಂಗ್ಲಿಯ ಬಾಲಕೃಷ್ಣ ಮುಳೆ ಅವರಿಂದ ಕೀರ್ತನೆ ನಡೆಯಲಿದೆ.

ಮೇ 17 ರಂದು ಬೆಳಗ್ಗೆ 6 ಕ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಿ ಮತ್ತು ಪರಿವಾರ ದೇವರಿಗೆ ಕಳಶಾಭಿಷೇಕ, 7 ಕ್ಕೆ ಪುಣ್ಯಾಹ ವಾಚನ, ಗಣಹೋಮ, 8 ಕ್ಕೆ ನವಗೃಹ ಹೋಮ, 10 ಕ್ಕೆ ಅನ್ನಪೂರ್ಣೇಶ್ವರಿ ಯಾಗ, ಮಹಾಪೂಜೆ, ಪ್ರಸನ್ನ ಪೂಜೆ, ಸಂಜೆ 4 ಕ್ಕೆ ರಂಗಪೂಜೆ, ಶ್ರೀದೇವಿಯ ಪಲ್ಲಕ್ಕಿ ಮೆರವಣಿಗೆ, ದೀಪೋತ್ಸವ ನಡೆಯಲಿದೆ. ಮೆರವಣಿಗೆಗೆ ಮಂಗಳೂರಿನ ಸುಪ್ರಸಿದ್ಧ ಹುಲಿವೇಷಧಾರಿಗಳು ಪಲ್ಲಕ್ಕಿ ಮೆರವಣಿಗೆಯಲ್ಲಿ ಭಾಗವಹಿಸಿ ಭಕ್ತರನ್ನು ರಂಜಿಸಲಿದ್ದಾರೆ. ಕೇರಳದಿಂದ ಮಹಿಷಾಸುರ ಮರ್ದಿನಿ ಕುರಿತ ವಿಶೇಷ ತಂಡ ಆಗಮಿಸಿ ಕಾರ್ಯಕ್ರಮ ನೀಡಲಿದೆ.

ಮೇ 18 ರಂದು ಬೆಳಗ್ಗೆ 7 ಕ್ಕೆ ಸಂಪ್ರೋಕ್ಷಣೆ, ಸುಬ್ರಮಣ್ಯ ದೇವರಿಗೆ ಅಶ್ಲೇಷಾ ಬಲಿ ಪೂಜೆ, 9 ಕ್ಕೆ ಮಹಾ ಚಂಡಿಕಾ ಹೋಮ, ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಮಹಾ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ :

ಈ ಸುಂದರ ದೇಗುಲ ನಿರ್ಮಿಸಿದವರು ಬೆಳಗಾವಿಯ ಹೋಟೆಲ್ ಉದ್ಯಮಿ 87 ವರ್ಷದ ರವಿರಾಜ ಹೆಗ್ಡೆ. ಮೂಲತಃ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮಿಯ್ಯಾರಿನವರಾದ ರವಿರಾಜ್ ಹೆಗ್ಡೆ ಅವರು 21 ವರ್ಷಗಳ ಹಿಂದೆ ಮೂಡುಬಿದಿರೆ ಬಳಿಯ ಪ್ರಸಿದ್ದ ಸುಕ್ಷೇತ್ರ ಕೊಡ್ಯಡ್ಕ ಹೊಸನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ದೇವಿಯ ದರ್ಶನಕ್ಕೆ ಹೋಗಿದ್ದರು. ದೇವಸ್ಥಾನ ಸಂದರ್ಶಿಸಿ  ದೇವಿಯ ದರ್ಶನ ಭಾಗ್ಯ ಲಭಿಸಿದಾಗ ರವಿರಾಜ ಹೆಗ್ಡೆಯವರಿಗೆ ಮನಸ್ಸಿನಲ್ಲಿ ಒಂದು ಪ್ರೇರಣೆಯಾಯಿತಂತೆ. ತಾನೇಕೆ ಇಂಥ ದೇವಸ್ಥಾನವನ್ನು ಕಟ್ಟಬಾರದೇಕೆ ಎಂಬ ಯೋಚನೆ ಬಂತಂತೆ. ನಂತರ ಅವರು ಬೆಳಗಾವಿಗೆ ಬಂದು ಈ ಬಗ್ಗೆ ದೃಢ ಚಿಂತನೆ ಮಾಡಿದರು. ದೇವಸ್ಥಾನ ನಿರ್ಮಿಸಲು ಮನಸ್ಸಿನಲ್ಲಿ ಗಟ್ಟಿ ನಿರ್ಧಾರ ತಳೆದರು. ಹೊಟೇಲು ಉದ್ಯಮದಿಂದ ಸ್ವಲ್ಪ ಸ್ವಲ್ಪವೇ ಹಣ ಸಂಗ್ರಹಿಸಿ ದೇವಸ್ಥಾನ ನಿರ್ಮಾಣದ ಬಗ್ಗೆ ನೀಲನಕ್ಷೆ ತಯಾರಿಸಿದರು. ನಂತರ ಅದರ ನಿರ್ಮಾಣಕ್ಕೆ ಮುಂದಾದರು. ಲಕ್ಷಾಂತರ ರೂ. ವೆಚ್ಚದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನವನ್ನು ನಿರ್ಮಿಸಿದರು.

- Advertisement -

Latest News

error: Content is protected !!