- Advertisement -
- Advertisement -
ಬಂಟ್ವಾಳ; ದಿನಾಂಕ 27.05.2025 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಇರಾಕೋಡಿಯಲ್ಲಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ಈಗಾಗಗೇ 8 ಮಂದಿಯನ್ನು ಬಂಧಿಸಲಾಗಿದ್ದು, ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ. ಇದೀಗ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಶಿವಪ್ರಸಾದ್ (33) ನನ್ನು ಬಂಟ್ವಾಳ ರಾಯಿ ಎಂಬಲ್ಲಿ ಬಂಧಿಸಲಾರಿದೆ. ಆರೋಪಿಯನ್ನು ದಿನಾಂಕ 30.06.2025ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಿರುತ್ತದೆ.
- Advertisement -