Wednesday, June 24, 2026
Homeತಾಜಾ ಸುದ್ದಿ2025ನೇ ಸಾಲಿನ ಬಿ.ಇಡಿ ಪ್ರವೇಶಾತಿಯ ದಾಖಲಾತಿ ಪರಿಶೀಲನೆಗೆ ಮತ್ತೊಂದು ಅವಕಾಶ

2025ನೇ ಸಾಲಿನ ಬಿ.ಇಡಿ ಪ್ರವೇಶಾತಿಯ ದಾಖಲಾತಿ ಪರಿಶೀಲನೆಗೆ ಮತ್ತೊಂದು ಅವಕಾಶ

- Advertisement -
- Advertisement -

ಬೆಂಗಳೂರು: 2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳಿಗೆ ದಾಖಲೆಗಳನ್ನು ಪರಿಶೀಲಿಸಿಕೊಂಡು ಅಪ್‌ಡೇಟ್ ಮಾಡಿಸಿಕೊಳ್ಳಲು ಇನ್ನೊಂದು ಅವಕಾಶವನ್ನು ನೀಡಲಾಗಿದೆ.

ಅರ್ಜಿ ಸಲ್ಲಿಸಿದವರಲ್ಲಿ 28,976 ಅರ್ಹ ಮತ್ತು 6,793 ಅಪೇಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಜಾಲತಾಣ https://schooleducation.karnataka.gov.in ರಲ್ಲಿ ಪ್ರಕಟಿಸಲಾಗಿದೆ.

ಈ ಎರಡೂ ಪಟ್ಟಿಗಳಲ್ಲಿರುವ ಪ್ರತಿಯೊಬ್ಬ ಅಭ್ಯರ್ಥಿಯೂ ಪಟ್ಟಿಯಲ್ಲಿ ನೀಡಲಾಗಿರುವ ಕೋಡ್ ಸಂಖ್ಯೆಯನುಸಾರ ಪಟ್ಟಿಯನ್ನು ಪುನಃ ಪರಿಶೀಲಿಸಿಕೊಳ್ಳಬೇಕಾಗಿದೆ.

ಪಟ್ಟಿಯಲ್ಲಿ ಯಾವುದೇ ತಪ್ಪು ಅಥವಾ ದೋಷ ಇದ್ದರೆ ನವೆಂಬರ್ 15 ರೊಳಗೆ ಸಂಬಂಧಿತ ನೋಡಲ್ ಕೇಂದ್ರಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಿ ಸರಿಪಡಿಸಿಕೊಳ್ಳಬೇಕಾಗಿದೆ.

ನವೆಂಬರ್ 15ರ ನಂತರ ಯಾವುದೇ ತಿದ್ದುಪಡಿಯನ್ನು ಮಾಡಲಾಗುವುದಿಲ್ಲ. ಮೂಲ ದಾಖಲೆಗಳನ್ನು ಪರಿಶೀಲಿಸಿಕೊಳ್ಳದ ಹಾಗೂ ಅಗತ್ಯ ತಿದ್ದುಪಡಿಯನ್ನು ಮಾಡಿಸಿಕೊಳ್ಳದ ಆಕ್ಷೇಪಿತ ಮತ್ತು ಅನರ್ಹ ಅಭ್ಯರ್ಥಿಗಳನ್ನು ಕೈಬಿಟ್ಟು ಉಳಿದವರ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರು ಮಾಡಿ ಕಾಲೇಜುಗಳ ಹಂಚಿಕೆಯನ್ನು ಮಾಡಲಾಗುವುದು ಎಂದು ಅಂತಿಮವಾಗಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 3 ರಿಂದ ನವೆಂಬರ್ 3 ರ ವರೆಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ನೋಡಲ್ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿತ್ತು. ಈ ಪೈಕಿ
6,174 ಅಭ್ಯರ್ಥಿಗಳು ಇನ್ನೂ ದಾಖಲೆಗಳ ಪರಿಶೀಲನೆಯನ್ನು ಮಾಡಿಸಿಕೊಂಡಿಲ್ಲ.

ಅಲ್ಲದೇ, ಅಭ್ಯರ್ಥಿಗಳು ಈಗಾಗಲೇ ತಮಗೆ ಬೇಕಾಗುವ ಕಾಲೇಜುಗಳ ಆಯ್ಕೆಯನ್ನು ಮಾಡಿದ್ದು ಅದರಲ್ಲಿ ಏನಾದರೂ ಬದಲಾವಣೆಯನ್ನು ಮಾಡ ಬಯಸಿದರೆ ಆನ್ ಲೈನ್ ಮೂಲಕ ಲಾಗಿನ್ ಆಗಿ
ನವೆಂಬರ್ 15 ರೊಳಗೆ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!