- Advertisement -
![]()
- Advertisement -
ಬೆಳ್ತಂಗಡಿ : ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ಮತ್ತೆ ಗಡಿಪಾರು ನೋಟೀಸ್ ನೀಡಲಾಗಿದೆ.
ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಮಾಡಿದ್ದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ನೀಡಿತ್ತು. ಹಾಗೂ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ 15 ದಿನದ ಒಳಗಡೆ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿತ್ತು.
ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದೆ. ಲಭ್ಯ ಮಾಹಿತಿಯಂತೆ ಮಹೇಶ್ ಶೆಟ್ಟಿಗೆ ಡಿ.8 ರಂದು 11 ಗಂಟೆಗೆ ಪುತ್ತೂರು ಎ.ಸಿ ಮುಂದೆ ಹಾಜರಾಗಲು ನೋಟಿಸ್ ಜಾರಿ ಮಾಡಿದೆ.
- Advertisement -


