Tuesday, July 14, 2026
HomeWorldಕೀವ್‌: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು- ಆಸ್ಪತ್ರೆಗೆ ದಾಖಲು

ಕೀವ್‌: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು- ಆಸ್ಪತ್ರೆಗೆ ದಾಖಲು

- Advertisement -
- Advertisement -

ಕೀವ್: ಉಕ್ರೇನ್ ರಾಜಧಾನಿ ಕೀವ್‌‌ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು ತಕ್ಷಣವೇ ವಿದ್ಯಾರ್ಥಿಯನ್ನು ಕೀವ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಯೊಬ್ಬರೂ ಕೀವ್‌ನಿಂದ ಹೊರಹೋಗಬೇಕೆಂದು ಭಾರತೀಯ ರಾಯಭಾರ ಕಚೇರಿ ಈ ಹಿಂದೆ ಆದ್ಯತೆಯ ಮೇಲೆ ಅನುಮೋದನೆ ನೀಡಿತ್ತು ಎಂದರು.

ಇನ್ನು ವಿದ್ಯಾರ್ಥಿಗಳು ಉಕ್ರೇನ್‌‌ನಿಂದ ಪಲಾಯನ ಮಾಡುತ್ತಿದ್ದು, ಭಾರತಕ್ಕೆ ಸುರಕ್ಷಿತವಾಗಿ ಮರಳಲು ಪೋಲೆಂಡ್ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ.

ನಾಲ್ಕು ಕೇಂದ್ರ ಸಚಿವರಾದ ಹರ್ ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಎಂ ಸಿಂಧಿಯಾ, ಕಿರೆನ್ ರಿಜಿಜು ಮತ್ತು ಜನರಲ್ವಿ ಕೆ ಸಿಂಗ್ ಅವರು ಉಕ್ರೇನ್ ಗಡಿಯಲ್ಲಿರುವ ದೇಶಗಳಲ್ಲಿ ಸ್ಥಳಾಂತರ ಪ್ರಯತ್ನಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!