- Advertisement -
- Advertisement -
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಒಂದಿಲ್ಲೊಂದು ಸಂಕಷ್ಟಗಳು ತಪ್ಪುತ್ತಲೇ ಇಲ್ಲ. ರಾಜಾತಿಥ್ಯದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಡಿ ಬಾಸ್ ಬಳ್ಳಾರಿ ಜೈಲಿನಲ್ಲಿಗೆ ಶಿಫ್ಟ್ ಆಗಿದ್ದಾರೆ. ಶನಿವಾರ ಅಂದರೆ ಸೆ.21 ರಂದು ಜಾಮೀನಿಗೆ ದಾಸ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಕೋರ್ಟ್ ಇಂದಿಗೆ ಅಂದರೆ ಸೆಪ್ಟಂಬರ್ 23ಕ್ಕೆ ಮುಂದೂಡಿಕೆ ಮಾಡಿತ್ತು. ಇಂದು ಮತ್ತೆ ವಿಚಾರಣೆ ಸೆಪ್ಟಂಬರ್ 27ಕ್ಕೆ ಮುಂದೂಡಿಕೆಯಾಗಿದೆ.
ಇದರ ಬೆನ್ನಲ್ಲೇ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 84 ಲಕ್ಷ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಅದರಂತೆ ಇದೀಗ ಐಟಿ ಅಧಿಕಾರಿಗಳು ನಟ ದರ್ಶನ್ ಮನೆಯ ಮೇಲೆ ದಾಳಿ ಮಾಡಲು ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ನಟ ದರ್ಶನ್ ಗೆ ಐಟಿ ಸಂಕಷ್ಟ ಎದುರಾಗಿದೆ.
- Advertisement -