ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಭಾರತೀಯ ಕುಸ್ತಿ ಫೆಡರೇಶ್ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿರುವುದನ್ನು ವಿರೋಧಿಸಿ ಕುಸ್ತಿಗೆ ವಿದಾಯ ಹೇಳಿರುವ ವಿಚಾರಕ್ಕೆ ಕುಸ್ತಿಪಟು ವೀರೇಂದ್ರ ಸಿಂಗ್ ಯಾದವ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಪದ್ಮಶ್ರೀ ಮರಳಿಸಿದ ಬೆನ್ನಲ್ಲೇ ವೀರೇಂದ್ರ ಸಿಂಗ್ ಕೂಡ “ನಾನು ಪದ್ಮಶ್ರೀ ವಾಪಸ್ ಕೊಡುತ್ತೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿ, ದೇಶದ ಮಗಳಿಗಾಗಿ ಪದ್ಮಶ್ರೀ ಹಿಂದಿರುಗಿಸುತ್ತೇನೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ ನಿಮ್ಮ ಮಗಳು, ನನ್ನ ಸಹೋದರಿ ಸಾಕ್ಷಿ ಮಲಿಕ್ ಬಗ್ಗೆ ನನಗೆ ಹೆಮ್ಮಯಿದೆ. ನಾನು ದೇಶದ ಉನ್ನತ ಆಟಗಾರರನ್ನು ಕೂಡ ಈ ವಿಚಾರದಲ್ಲಿ ನಿಮ್ಮ ನಿರ್ಧಾರ ಕೋರುತ್ತೇನೆ” ಎಂದು ವೀರೇಂದ್ರ ಸಿಂಗ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ನೀರಜ್ ಚೋಪ್ರಾ ಅವರಿಗೆ ಪೋಸ್ಟ್ ಟ್ಯಾಗ್ ಮಾಡಿದ್ದಾರೆ.