Friday, May 3, 2024
Homeತಾಜಾ ಸುದ್ದಿಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಸರ್ಕಾರದಿಂದ ಆದೇಶ

ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಸರ್ಕಾರದಿಂದ ಆದೇಶ

spot_img
- Advertisement -
- Advertisement -

ಬೆಂಗಳೂರು: ಸರ್ಕಾರವು ಖಾಸಗಿ ಶಾಲೆಗಳಿಗೆ ಹೊಸ ಆದೇಶವೊಂದು ಹೊರಡಿಸಿದ್ದು, ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು, ‘ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು,’ ಎನ್ನುವ ವಿವಾದಿತ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.

ಈ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

ಪ್ರಿಂಟ್‌ ಮಿಸ್ಟೇಕ್‌ ಎಂದ ಸಚಿವ: ಇನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಇದು ಪ್ರಿಂಟ್‌ ಮಿಸ್ಟೇಕ್‌ ಎನ್ನುವ ಮೂಲಕ ತಿಪ್ಪೇ ಸಾರಿಸುವ ಪ್ರಯತ್ನ ಮಾಡಿದ್ದಾರೆ. ಒಂದು ಸಣ್ಣ ಪ್ರಿಂಟ್ ಸಮಸ್ಯೆಯಿಂದ ಈ ರೀತಿ ಆಗಿದೆ. ನಮಗೆ ಎಲ್ಲಾ ಶಾಲೆಗಳು ಒಂದೇ . ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ, ಅನುದಾನಿತ‌ ಶಾಲೆ ಅಂತಾ ಹಾಕಿದ್ದಾರೆ. ಅದು ಎಲ್ಲಾ ಶಾಲೆಗಳು ಅಂತಾ ಹಾಕಿಸುತ್ತೇವೆ. ನಮ್ಮ ಸರ್ಕಾರ ಕನ್ನಡ ಬಗ್ಗೆ ಕಾಳಜಿ ಇಟ್ಟಿದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ ಭಾದಕ ಹೇಳಬೇಕು. ಮಾಧ್ಯಮ ಮಿತ್ರರಿಗೆ ಇದರ ಬಗ್ಗೆ ತಿಳಿಸಬೇಕು ಅಂತಾನೇ ಬಂದೆ. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!