- Advertisement -
- Advertisement -
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಮಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅಧಿಕಾರ ಹಸ್ತಾಂತರ ಮಾಡಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಆಯುಕ್ತ ಅನುಪಮ್ ಅಗರ್ವಾಲ್, ನೈತಿಕ ಪೊಲೀಸ್ ಗಿರಿ, ಕೋಮು ಸಂಘರ್ಷ ಮತ್ತು ಡ್ರಗ್ಸ್ ಮಾಫಿಯಾ ವಿರುದ್ಧ ಮೊದಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮೊನ್ನೆಯಷ್ಟೇ ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಸ್ಥಳ ನಿಯೋಜಿಸದೇ ಅವಧಿ ಪೂರ್ವ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.ಕುಲದೀಪ್ ಕುಮಾರ್ ದಿಢೀರ್ ವರ್ಗಾವಣೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ಕೂಡಾ ವ್ಯಕ್ತವಾಗಿತ್ತು.
- Advertisement -