- Advertisement -
![]()
- Advertisement -
ರಾಮನಗರ: ಮುತ್ತಪ್ಪ ರೈ ಪುತ್ರ ರಿಕಿ ರೈ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ.
ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅನುರಾಧಾ ರೈ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದು ಸಂಜೆ ಅರ್ಜಿಯ ವಿಚಾರಣೆ ನಡೆಯಲಿದೆ ಎನ್ನಲಾಗಿದೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಅನುರಾಧಾ ರೈ
ಈಗಾಗಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದರ ಜೊತೆಯಲ್ಲೇ ಇದೀಗ ನೀರಿಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.
ಈ ಮಧ್ಯೆ ಒಂದು ವಾರದ ಹಿಂದೆಯೇ ಅನುರಾಧಾ ರೈ ವಿದೇಶಕ್ಕೆ ತೆರಳಿದ್ದಾರೆ ಎಂದೂ ಹೇಳಲಾಗುತ್ತಿದೆ. ಕಳೆದ ಶುಕ್ರವಾರ ತಡರಾತ್ರಿ ರಾಮನಗರ ಜಿಲ್ಲೆಯ ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕಿ ರೈ ಮೇಲೆ ಗುಂಡಿನ ದಾಳಿ ನಡೆದಿತ್ತು.
- Advertisement -


