- Advertisement -
- Advertisement -
ಕೇರಳ; ಖ್ಯಾತ ಮಲಯಾಳಂ ನಟಿ ಅಪರ್ಣಾ ನಾಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ಸಂಜೆ ತಿರುವನಂತಪುರಂನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಲನಚಿತ್ರಗಳು ಮತ್ತು ಹಲವಾರು ಧಾರಾವಾಹಿಗಳಲ್ಲಿ ನಟಿಸಿರುವ 33 ವರ್ಷದ ನಟಿ ಅಪರ್ಣ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ .
ನಟಿಯ ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲ.ಆದರೆ ನಟಿ ಅಪರ್ಣಾ ಅವರು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಹಾಕಿದ್ದಾರೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
- Advertisement -