Monday, May 13, 2024
Homeಕರಾವಳಿಶರಣ್ ಪಂಪ್‌ವೆಲ್ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸಚಿವರಿಗೆ ಮನವಿ; ಹಿಂದು-ಮುಸ್ಲಿಂ ಗಲಭೆ ಕುರಿತ ಆರೋಪ

ಶರಣ್ ಪಂಪ್‌ವೆಲ್ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಸಚಿವರಿಗೆ ಮನವಿ; ಹಿಂದು-ಮುಸ್ಲಿಂ ಗಲಭೆ ಕುರಿತ ಆರೋಪ

spot_img
- Advertisement -
- Advertisement -

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದ ದಸರಾ ಜಾತ್ರೆಯಲ್ಲಿ ಹಿಂದು ವ್ಯಾಪಾರಸ್ಥರ ಮಳಿಗೆಗಳಿಗೆ ಕೇಸರಿ ಬಾವುಟ ಕಟ್ಟುವಂತೆ ಹಾಗೂ ಮುಸ್ಲಿಂ ವ್ಯಾಪಾರಿಗಳ ಮಳಿಗೆಗಳಲ್ಲಿ ಹಿಂದುಗಳು ವ್ಯಾಪಾರ ನಡೆಸಬಾರದು ಎಂದು ಬಹಿರಂಗವಾಗಿ ಕರೆ ನೀಡಿರುವ ವಿಶ್ವ ಹಿಂದೂ ಪರಿಷತ್‌ನ ಶರಣ್ ಪಂಪ್‌ವೆಲ್ ಮತ್ತು ತಂಡವನ್ನು ಕೋಮು ಪ್ರಚೋದಕ ಸೆಕ್ಷನ್‌ಗಳಡಿ ಬಂಧಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ದ ಕ ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ವಿಚಾರದ ಕುರಿತು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರದಂದು ಬೆಳಗ್ಗೆ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ ನಿಯೋಗವು, ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಮನವಿ ಪತ್ರದಲ್ಲಿ, ಮಂಗಳೂರಿನ ಇತಿಹಾಸ ಪ್ರಸಿದ್ದ ಮಂಗಳಾದೇವಿ ದೇವಸ್ಥಾನದ ದಸರಾ ಉತ್ಸವ ಮಂಗಳೂರಿನ ಎಲ್ಲ ಸಮುದಾಯಗಳು ಸಂಭ್ರಮಿಸುವ ಹಬ್ಬವಾಗಿ ಕಳೆದ ಶತಮಾನದಿಂದಲೇ ಖ್ಯಾತಿ ಪಡೆದಿದೆ. ಮುಸ್ಲಿಂ ಮಹಿಳೆಯರು, ಮಕ್ಕಳು ಸೇರಿದಂತೆ ಕುಟುಂಬ ಸಮೇತ ಮಂಗಳಾದೇವಿ ದಸರಾ ಹುಲಿ ವೇಷಗಳು, ಬಣ್ಣದ ಬೆಳಕು, ಸಂತೆಗಳನ್ನು ನೋಡಲು ನಿರ್ಭಯವಾಗಿ ಭಾಗಿಗಳಾಗುವುದು ಮಂಗಳಾದೇವಿ ದೇವಳ ಹಾಗೂ ಅಲ್ಲಿನ ದಸರಾ ಉತ್ಸವದ ಸೌಹಾರ್ದತೆ, ಜಾತಿ, ಧರ್ಮಗಳನ್ನು ಮೀರಿ ಒಳಗೊಳ್ಳುವ ಗುಣಕ್ಕೆ ಸಾಕ್ಷಿ. ಇಂತಹ ಬಹುದೊಡ್ಡ ಖ್ಯಾತಿಯುಳ್ಳ ಕ್ಷೇತ್ರ ಹಾಗೂ ಆ ಕ್ಷೇತ್ರದ ಪ್ರಖ್ಯಾತ ದಸರಾ ಉತ್ಸವವನ್ನೇ ಗುರಿಯಾಗಿಸಿ ವಿಎಚ್‌ಪಿ, ಬಜರಂಗದಳವನ್ನು ಭೂ ಬಿಟ್ಟು ಮತೀಯ ಸೌಹಾರ್ದತೆಯನ್ನು ಕದಡುವ ಕೆಲಸ ಬಹಿರಂಗವಾಗಿಯೇ ನಡೆಯತೊಡಗಿದೆ. ಅದರ ಭಾಗವಾಗಿಯೇ ಮುಸ್ಲಿಂ ಜಾತ್ರಾ ವ್ಯಾಪಾರಿಗಳಿಗೆ ಮಂಗಳಾದೇವಿ ದಸರಾ ಸಂತೆಯಲ್ಲಿ ಅಂಗಡಿ ಮಳಿಗೆ ನೀಡದಂತೆ ದೇವಸ್ಥಾನ ಆಡಳಿತ ಮಂಡಳಿಗೆ ಮನವಿ ಮಾದರಿಯಲ್ಲಿ ಬೆದರಿಕೆ ಪತ್ರ ನೀಡಲಾಯಿತು. ಆ ಮೂಲಕ ಜನರ ನಡುವೆ ಗೊಂದಲ ಮೂಡಿಸಲು ಯತ್ನಿಸಲಾಯಿತು. ಜಿಲ್ಲಾಡಳಿತದ ಮಧ್ಯಪ್ರವೇಶದ ನಂತರ ಆ ಪ್ರಯತ್ನ ವಿಫಲಗೊಂಡು ಹಿನ್ನಡೆ ಅನುಭವಿಸಿದ ನಂತರ ಮಂಗಳಾದೇವಿ ದೇವಸ್ಥಾನದ ಮುಂಭಾಗದ ನಗರ ಪಾಲಿಕೆ ಜಾಗದಲ್ಲಿ ಹಾಕಲಾದ ಜಾತ್ರೆ ವ್ಯಾಪಾರದ ಸ್ಟಾಲ್‌ಗಳಲ್ಲಿ ಹಿಂದು ಧರ್ಮೀಯ ವ್ಯಾಪಾರಿಗಳ ಮಳಿಗೆಗಳನ್ನು ಹುಡುಕಿ ಬಲವಂತವಾಗಿ ಕೇಸರಿ ಧ್ವಜ ಕಟ್ಟುವ, ಆ ಮೂಲಕ ಮುಸ್ಲಿಂ ವ್ಯಾಪಾರಿಗಳನ್ನು ಪ್ರತ್ಯೇಕಿಸುವ, ಕೇಸರಿ ಬಾವುಟ ಕಟ್ಟಿರುವ ಮಳಿಗೆಗಳಲ್ಲಿ ಮಾತ್ರ ಹಿಂದುಗಳು ವ್ಯಾಪಾರ ನಡೆಸುವಂತೆ ಮುಸ್ಲಿಂ ಸಂತೆ ವ್ಯಾಪಾರಿಗಳೊಂದಿಗೆ ವ್ಯಾಪಾರ ನಡೆಸದೆ ಬಹಿಷ್ಕಾರ ಹಾಕುವಂತೆ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಬಜರಂಗದಳದ ಮುಖಂಡರು ಬಹಿರಂಗ ಕರೆ ನೀಡಿದ್ದಾರೆ ಎಂದು ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂದರ್ಭದಲ್ಲಿ ನಿಯೋಗದ ಜಂಟಿ ವೇದಿಕೆಯ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ ಶೇಖರ್, ದಲಿತ ಸಂಘರ್ಷ ಸಮಿತಿಯ ಎಂ ದೇವದಾಸ್, ರಘು ಕೆ ಎಕ್ಕಾರು, ಸಾಮಾಜಿಕ ಕಾರ್ಯಕರ್ತ ಎಂ ಜಿ ಹೆಗ್ಡೆ ಯಾಸೀನ್ ಕುದ್ರೋಳಿ, ದ. ಕ, ಉಡುಪಿ ಜಿಲ್ಲಾ ಜಾತ್ರೆ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ ಕೆ ಇಮಿಯಾಝ್, ಪದಾಧಿಕಾರಿಗಳಾದ ಮುಸ್ತಫಾ, ಶ್ರೀನಿವಾಸ್, ಹಿರಿಯ ಕಾರ್ಮಿಕ ನಾಯಕರಾದ ವಿ ಕುಕ್ಯಾನ್, ಕರುಣಾಕರ ಮಾರಿಪಳ್ಳ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಾಮರಸ್ಯ ಮಂಗಳೂರು ಇದರ ಮಂಜುಳಾ ನಾಯಕ್, ಸಮರ್ಥ್ ಭಟ್ ಸಹಿತ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!