Friday, May 17, 2024
Homeತಾಜಾ ಸುದ್ದಿಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ: ಅರ್ಜಿ ತಿರಸ್ಕೃತ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ: ಅರ್ಜಿ ತಿರಸ್ಕೃತ

spot_img
- Advertisement -
- Advertisement -

ನವದೆಹಲಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಇದು ನ್ಯಾಯಲಯದ ಕೆಲಸವಲ್ಲ ಎಂದು ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ನ್ಯಾ. ಅಭಯ್ ಎಸ್.ಓಕಾ ಪೀಠ ಖಾರವಾಗಿ ಪ್ರತಿಕ್ರಿಯಿಸಿದೆ. ಗೋವಂಶ್ ಸೇವಾ ಸದನ್ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಪೀಠ, ಇದು ನ್ಯಾಯಾಲಯದ ಕೆಲಸವೇ? ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಇಂತಹ ವಿಷಯಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಮತ್ತು ಅರ್ಜಿದಾರರ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಹೇಳಿ ಎಂದು ಅರ್ಜಿದಾರರಿಗೆ ಕೇಳಿತು.

- Advertisement -
spot_img

Latest News

error: Content is protected !!