Monday, April 29, 2024
Homeತಾಜಾ ಸುದ್ದಿದ.ಕ., ಉಡುಪಿ, ಉ.ಕ. ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿಗೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಅರ್ಜಿ ಆಹ್ವಾನ

ದ.ಕ., ಉಡುಪಿ, ಉ.ಕ. ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿಗೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಅರ್ಜಿ ಆಹ್ವಾನ

spot_img
- Advertisement -
- Advertisement -

ಬೆಂಗಳೂರು: ಸೇನೆ ಮತ್ತು ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಲು ಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀರ ರಾಣಿ ಅಬ್ಬಕ್ಕ, ಉಡುಪಿ ಜಿಲ್ಲೆಯಲ್ಲಿ ಕೋಟಿ-ಚೆನ್ನಯ್ಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಂಜಾ ನಾಯಕ ಸೇನಾ ಪೂರ್ವ ತರಬೇತಿ ಶಾಲೆಗಳಲ್ಲಿ ತರಬೇತಿ ನೀಡಲಾಗುತ್ತದೆ.

ಈ ವರ್ಷ ತರಬೇತಿಗೆ ಅರ್ಜಿ ಆಹ್ವಾನಿಸದೇ ಇರುವ ಬಗ್ಗೆ ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದರು.ನಂತರ ಸೋಮವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇನಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೇನಾ ಪೂರ್ವ ತರಬೇತಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೋಟ ಶ್ರೀನಿವಾಸ ಪೂಜಾರಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿದ್ದ ವೇಳೆ ಯೋಜನೆ ಅನುಷ್ಠಾನಗೊಂಡಿತ್ತು.

- Advertisement -
spot_img

Latest News

error: Content is protected !!