Friday, May 3, 2024
Homeತಾಜಾ ಸುದ್ದಿಗೃಹ ಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿಸಲ್ಲಿಕೆ ಪ್ರಕ್ರಿಯೆ ಆರಂಭ

ಗೃಹ ಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿಸಲ್ಲಿಕೆ ಪ್ರಕ್ರಿಯೆ ಆರಂಭ

spot_img
- Advertisement -
- Advertisement -

ಮೈಸೂರು: ಗೃಹ ಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯದಲ್ಲಿನ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗಾಗಿ ಸೇವಾ ಸಿಂಧುವಿನ ಪ್ರತ್ಯೇಕ ವೆಬ್ ಸೈಟ್ https://sevasindhugs.karnataka.gov.in/about_kannada.html ಈ ಲಿಂಕ್ ನಲ್ಲಿ ಮೂಲಕ ಸಲ್ಲಿಸಬಹುದಾಗಿದೆ.

ಇದಲ್ಲದೇ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಗ್ರಾಮ ಒನ್, ಕರ್ನಾಟಕ ಓನ್ ಹಾಗೂ ಬೆಂಗಳೂರು ಒನ್ ಸೆಂಟರ್ ಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲೆ ಬೇಕು.?

ಗೃಹ ಲಕ್ಷ್ಮೀ ಯೋಜನೆಗೆ ಕುಟುಂಬದ ಯಜಮಾನಿ ಮಹಿಳೆಯು ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಹಾಗೂ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ನೀಡಬೇಕಿದೆ.

- Advertisement -
spot_img

Latest News

error: Content is protected !!