Saturday, October 17, 2026
Homeಕರಾವಳಿಮಂಗಳೂರುಬೆಳ್ತಂಗಡಿ : ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

ಬೆಳ್ತಂಗಡಿ : ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

- Advertisement -
- Advertisement -

ಬೆಳ್ತಂಗಡಿ : ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ತಿಮರೋಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ರೌಡಿಶೀಟರ್ ಆಗಿರುವ ತಿಮರೋಡಿ ನಿವಾಸಿ ಮಹೇಶ್ ಶೆಟ್ಟಿ ಗಡಿಪಾರು ಆದೇಶವನ್ನು ಮಧ್ಯಂತರ ತಡೆ ನೀಡಲು ತಮ್ಮ ವಕೀಲರ ಮೂಲಕ ಸೆ.29 ರಂದು ಹೈಕೋರ್ಟ್ ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ, ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಹೈಕೋರ್ಟ್ ನ ಸಿ.ಎಂ.ಪೂನಚ ಅವರ ಏಕಸದಸ್ಯ ಪೀಠದ ಎದುರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು ಸೆ.30 ರಂದು ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ.

- Advertisement -

Latest News

error: Content is protected !!