Wednesday, June 3, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚು ತಡೆಯಲು ಅರಣ್ಯ ಸಿಬ್ಬಂದಿಯ ನೇಮಕ

ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚು ತಡೆಯಲು ಅರಣ್ಯ ಸಿಬ್ಬಂದಿಯ ನೇಮಕ

- Advertisement -
- Advertisement -

ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚು ತಡೆಯಲು ಅರಣ್ಯ ಸಿಬ್ಬಂದಿಯ ನೇಮಕ ಮಾಡಲಾಗಿದೆ. ಕೊಟ್ಟಿಗೆಹಾರದಲ್ಲಿ ಕಾಡ್ಗಿಚ್ಚು ತಡೆಯಲೆಂದೇ ಸಿಬ್ಬಂದಿ ನೇಮಕ ಮಾಡಲಾಗಿದೆ.

ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡಿಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಳ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ. ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಗಿದೆ. ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ.

- Advertisement -

Latest News

error: Content is protected !!