Friday, April 26, 2024
Homeತಾಜಾ ಸುದ್ದಿಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ಹಿರಿಯ ಉಪನ್ಯಾಸಕರು ಪ್ರಭಾರಿಯಾಗಿ ನೇಮಕ

ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ಹಿರಿಯ ಉಪನ್ಯಾಸಕರು ಪ್ರಭಾರಿಯಾಗಿ ನೇಮಕ

spot_img
- Advertisement -
- Advertisement -

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಪ್ರಭಾರಿ ಪ್ರಾಂಶುಪಾಲರಾಗಿ ಕೌನ್ಸೆಲಿಂಗ್ ಮೂಲಕ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸದ್ಯ ಈ ಹುದ್ದೆಗಳಲ್ಲಿ ಗ್ರೇಡ್-1 ದರ್ಜೆಯ 327 ಹುದ್ದೆಗಳು ಪದವಿ ಕಾಲೇಜುಗಳಲ್ಲಿ ಮತ್ತು ಗ್ರೇಡ್-2 ದರ್ಜೆಯ 38 ಹುದ್ದೆಗಳು ಸ್ನಾತಕೋತ್ತರ ಕೋರ್ಸ್ ಇರುವ ಪದವಿ ಕಾಲೇಜುಗಳಲ್ಲಿ ಲಭ್ಯವಿವೆ. ಈ ಹುದ್ದೆಗಳಲ್ಲಿ ಇದುವರೆಗೂ ಕಾರ್ಯ ನಿರ್ವಹಿಸುತ್ತಿದ್ದವರು ಫೆಬ್ರವರಿ ತಿಂಗಳಲ್ಲಿ ನಿವೃತ್ತರಾಗಿದ್ದಾರೆ. ಹೀಗಾಗಿ, ಕಾಲೇಜುಗಳಲ್ಲಿ ನಾಯಕತ್ವದ ಕೊರತೆ ಉಂಟಾಗಬಾರದೆಂಬ ದೃಷ್ಟಿಯಿಂದ ಉನ್ನತ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ.

ಪ್ರಾಂಶುಪಾಲರ ಹುದ್ದೆ ಖಾಲಿ ಇರುವ ಕಾಲೇಜುಗಳ ವಿವರಗಳನ್ನು ಕೌನ್ಸೆಲಿಂಗ್ ಆರಂಭಿಸುವುದಕ್ಕೂ 15 ದಿನಗಳ ಮೊದಲೇ ಕಾಲೇಜು ಶಿಕ್ಷಣ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಪ್ರಭಾರಿ ನೇಮಕ ಪ್ರಕ್ರಿಯೆಯಲ್ಲೂ ಸೇವಾಜ್ಯೇಷ್ಠತೆಯ ಆಧಾರದ ಮೇಲೆಯೇ ಆಯ್ಕೆ ಶ್ರೇಣಿ ಉಪನ್ಯಾಸಕರು, ಸಹ ಮತ್ತು ಸಹಾಯಕ ಪ್ರಾಧ್ಯಾಪಕರನ್ನು ಮಾತ್ರವೇ ಕೌನ್ಸಿಲಿಂಗಿಗೆ ಕರೆಯಲಾಗುವುದು. ಜತೆಗೆ, ಈ ಹುದ್ದೆಗೆ ಆಯ್ಕೆಯಾಗುವವರು ಬೋಧಿಸುವಂತಹ ವಿಷಯವು ಆಯಾ ಕಾಲೇಜಿನಲ್ಲಿ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!