Thursday, June 4, 2026
Homeತಾಜಾ ಸುದ್ದಿಪಿಎಫ್‌ಐ ನಿಷೇಧ ಸ್ವಾಗತಾರ್ಹ: ಭಯೋತ್ಪಾದಕ ಕೃತ್ಯಗಳ ವಿರುದ್ಧ ಕೇಂದ್ರದಿಂದ ಸೂಕ್ತ ಕ್ರಮ: ಆರಗ ಜ್ಞಾನೇಂದ್ರ

ಪಿಎಫ್‌ಐ ನಿಷೇಧ ಸ್ವಾಗತಾರ್ಹ: ಭಯೋತ್ಪಾದಕ ಕೃತ್ಯಗಳ ವಿರುದ್ಧ ಕೇಂದ್ರದಿಂದ ಸೂಕ್ತ ಕ್ರಮ: ಆರಗ ಜ್ಞಾನೇಂದ್ರ

- Advertisement -
- Advertisement -

ತೀರ್ಥಹಳ್ಳಿ: ಐದು ವರ್ಷಗಳವರೆಗೆ ಪಿಎಫ್‌ಐ ನಿಷೇಧಿಸಿರುವುದು ಸ್ವಾಗತಾರ್ಹ. ದೇಶದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡಿ ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ಐ ಹಾಗೂ ಅದರ ಇತರೆ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸೂಕ್ತ ಕ್ರಮ ತೆಗೆದುಕೊಂಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ತೀರ್ಥಹಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 5 ವರ್ಷ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿರುವುದು ಮಹತ್ವದ ಬೆಳವಣಿಗೆ. ಪಿಎಫ್​ಐ ಹಾಗೂ ಅದರ ಇತರೆ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳವರೆಗೆ ಯುಎಪಿಎ ಕಾಯ್ದೆ ಅಡಿ ನಿಷೇಧಿಸಿದೆ. ಸರ್ಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದರು.

- Advertisement -

Latest News

error: Content is protected !!