Saturday, May 18, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎಂ ಅಮೃತ ನಗರೋತ್ಥಾ‌ನ ಯೋಜನೆಯಡಿ 72.25 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಅನುಮೋದನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎಂ ಅಮೃತ ನಗರೋತ್ಥಾ‌ನ ಯೋಜನೆಯಡಿ 72.25 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಅನುಮೋದನೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ 1519.43 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಒಪ್ಪಿಗೆ ದೊರೆತಿದೆ.

ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜು ಅವರ ಅಧ್ಯಕ್ಷತೆಯ ರಾಜ್ಯ ಮಟ್ಟದ ಸಮಿತಿ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 72.25 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ 2022-23 ರಿಂದ 2024-25ನೇ ಸಾಲಿನ ಆರ್ಥಿಕ ವರ್ಷದವರೆಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಈ ಕಾಮಗಾರಿಗಳನ್ನು ಕೈಗತ್ತಿಕೊಳ್ಳಲಾಗುತ್ತದೆ.

ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪಟ್ಟಣ ಪಂಚಾಯಿತಿ ಹೊರತುಪಡಿಸಿ ಕಾಮಗಾರಿ ನಡೆಯಲಿದೆ. ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯಡಿ 3885.00 ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಕಳೆದ ಜನವರಿಯಲ್ಲಿ ಅನುಮೋದನೆ ನೀಡಿತ್ತು.

- Advertisement -
spot_img

Latest News

error: Content is protected !!