ಮಂಗಳೂರು, ಎ.15: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಇಂದು ಪ್ರಯೋಗಾಲಯದಿಂದ ಬಂದ 42 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇದರೊಂದಿಗೆ ಕಳೆದ 11 ದಿನದಿಂದ ಬಂದ ವರದಿಗಳೆಲ್ಲವೂ ನೆಗೆಟಿವ್ ಆಗಿದ್ದು, ಇದು ದ.ಕ.ಜಿಲ್ಲೆಯ ಮಟ್ಟಿಗೆ ನೆಮ್ಮದಿಯ ವಿಚಾರವಾಗಿದೆ.
ಎ.4ರವರೆಗೆ ಅಂದರೆ 11 ದಿನದ ಹಿಂದೆ 12 ಪಾಸಿಟಿವ್ ವರದಿ ಬಂದಿತ್ತು. ಆ ಬಳಿಕ ಬಂದ ವರದಿಗಳೆಲ್ಲವೂ ನೆಗೆಟಿವ್ ಆಗಿದೆ. ಅಂದಹಾಗೆ ಇನ್ನೂ 148 ಮಂದಿಯ ವರದಿಗಾಗಿ ಕಾಯಲಾಗುತ್ತಿದೆ.
ಜ್ವರದ ಹಿನ್ನೆಲೆಯಲ್ಲಿ 15 ಮಂದಿಯ ಮೇಲೆ ನಿಗಾ ಇಡಲಾಗಿದೆ. ಬುಧವಾರ 74 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಇದರೊಂದಿಗೆ ಈವರೆಗೆ 39,658 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ.
ಇಂದು ವೆನ್ಲಾಕ್ ಆಸ್ಪತ್ರೆಯಲ್ಲಿ ಯಾರೂ ಕ್ವಾರಂಟೈನ್‌ನಲ್ಲಿಲ್ಲ . ಆದರೆ1,225 ಮಂದಿ ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದಾರೆ.. ಇಎಸ್‌ಐ ಆಸ್ಪತ್ರೆಯಲ್ಲಿ 25 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ.
ಈವರೆಗೆ 658 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 510 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 498 ಮಂದಿಯ ವರದಿಯು ನೆಗೆಟಿವ್ ಆಗಿದ್ದರೆ, 12 ಮಂದಿಯ ವರದಿಯು ಪಾಸಿಟಿವ್ ಆಗಿತ್ತು.