ಬೆಂಗಳೂರು : ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ಯವಾದ ಹಿನ್ನಲೆಯಲ್ಲಿ ಏಪ್ರಿಲ್ 20ರಿಂದ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡುವ ನಿರ್ಧಾರವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಪುನರ್ ವಿಮರ್ಶೆ ಮಾಡಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಿಮರ್ಶಿಸಿಕೊಂಡಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ಸರ್ಕಾರ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
ದ್ವಿಚಕ್ರ ವಾಹನಕ್ಕೆ ಅನುಮತಿ ನೀಡುವ ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು. ಜನಾಭಿಪ್ರಾಯದ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಯಥಾಸ್ಥಿತಿ ಲಾಕ್‌ಡೌನ್ ಮುಂದುವರಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ದ್ವಿಚಕ್ರ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ ನಿರ್ಧಾರವನ್ನು ಪುನರ್ ಪರಿಶೀಲಿಸಿ, ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲು ನಿರ್ಧರಿಸಲಾಗಿದೆ. ಲಾಕ್‌ಡೌನ್ ಸಮಯದಲ್ಲಿದ್ದಂತೆ ಯಥಾಸ್ಥಿತಿಯನ್ನು ಮುಂದುವರೆಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.