Sunday, April 28, 2024
HomeUncategorizedಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ; ಉಡುಪಿ, ದಕ್ಷಿಣಕನ್ನಡದಲ್ಲಿ ಏಪ್ರಿಲ್ 26 ರಂದು ಮತದಾನ

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ; ಉಡುಪಿ, ದಕ್ಷಿಣಕನ್ನಡದಲ್ಲಿ ಏಪ್ರಿಲ್ 26 ರಂದು ಮತದಾನ

spot_img
- Advertisement -
- Advertisement -

ನವದೆಹಲಿ; ಕರ್ನಾಟಕದ 28 ಕ್ಷೇತ್ರಗಳಲ್ಲಿ 14  ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದ್ರೆ ಉಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದ ಏಪ್ರಿಲ್ 26 ಮತ್ತು ಮೇ 7 ಕ್ಕೆ ನಡೆಯಲಿದೆ.


ಉಡುಪಿ ಚಿಕ್ಕಮಗಳೂರು ಹಾಗೂ ದಕ್ಷಿಣಕನ್ನಡಕ್ಕೆ ಎಪ್ರಿಲ್ 26 ರಂದು ಮತದಾನ ನಡೆಯಲಿದೆ. ಕರ್ನಾಕಟದಲ್ಲಿ ಏಪ್ರಿಲ್ 26ಕ್ಕೆ 14 ಕ್ಷೇತ್ರಗಳು ಮತದಾನ ನಡೆಯಲಿದೆ. ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ , ತುಮಕೂರು, ಮಂಡ್ಯ, ಮೈಸೂರು ,ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ ದಲ್ಲಿ ನಡೆಯಲಿದೆ.

ಮೇ 7ಕ್ಕೆ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಮತದಾನ ನಡೆಯಲಿದೆ.

- Advertisement -
spot_img

Latest News

error: Content is protected !!