Friday, March 29, 2024
Homeಕರಾವಳಿಸುಳ್ಯದಲ್ಲಿ ಪಿಎಫ್ಐ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿತ್ತು; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

ಸುಳ್ಯದಲ್ಲಿ ಪಿಎಫ್ಐ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿತ್ತು; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

spot_img
- Advertisement -
- Advertisement -

ಬೆಂಗಳೂರು: ಪಿಎಫ್ ಐ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಸಂಘಟನೆಗೆ ಸಂಬಂಧಿಸಿದಂತೆ ಒಂದೊಂದೇ ಸಂಗತಿಗಳು ಬಯಲಾಗುತ್ತಿವೆ. ಇದೀಗ ಕರಾವಳಿಯಲ್ಲಿ ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗವೊಂದರ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ಖಚಿತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು ನಡೆಸಿದ ದಾಳಿಯಲ್ಲಿ ಅನೇಕರನ್ನು ಬಂಧಿಸಲಾಗಿದ್ದು, ಕೇಂದ್ರ ಸರ್ಕಾರ ಐದು ವರ್ಷ ಸಂಘಟನೆಯನ್ನು ನಿಷೇಧಿಸಿದೆ. ಅಲ್ಲದೆ ಬಂಧಿತ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದ್ದು, ಆಘಾತಕಾರಿ ಮಾಹಿತಿಗಳು ಒಂದೊಂದಾಗಿಯೇ ಹೊರಬೀಳುತ್ತಿದೆ. ಈ ಪೈಕಿ ಕಾರ್ಯಕರ್ತರಿಗೆ ಉಗ್ರ ಮಾದರಿಯ ತರಬೇತಿ ನೀಡುತ್ತಿದ್ದ ಸಂಗತಿಯೂ ಒಂದಾಗಿದೆ ಎಂದು ಅವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!