Tuesday, April 30, 2024
Homeಕರಾವಳಿಅರಂತೋಡು: ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ

ಅರಂತೋಡು: ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ

spot_img
- Advertisement -
- Advertisement -

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಅರಂತೋಡು ಗ್ರಾಮ ಪಂಚಾಯತ್ ಇದರ ಅಶ್ರಯದಲ್ಲಿ ‘ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ’ಕಾರ್ಯಕ್ರಮ ದಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮ ಇಂದು ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿರಿಸೌಧ ಸಭಾಭವನ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀ ಶಕ್ತಿ ಗೊಂಚಲಿನ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ವನಿತಾ ಇವರು ವಹಿಸಿದರು. ಮುಖ್ಯ ಅತಿಥಿಗಳಾಗಿ ಅರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರ ಸಂಘದ ಸಹಾಯಕ ವ್ಯವಸ್ಥಾಪಕರಾದ ಶ್ರೀಯುತ ಪ್ರದೀಪ್ ಹಾಗೂ ಅರಂತೋಡು ವಲಯ ಮೇಲ್ವಿಚಾರಕಿ ಶ್ರೀಮತಿ ದೀಪಿಕಾ ಅರಂತೋಡು ತೊಡಿಕಾನ ಗ್ರಾಮದ ಕಿ.ಮ.ಆ ಸಹಾಯಕಿಯರಾದ ಶ್ರೀಮತಿ ಪುಷ್ಪಲತಾ ಮತ್ತು ಶ್ರೀಮತಿ ಭಾಗೀರಥಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಮತ್ತು ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಆಶಾ ಕಾರ್ಯಕರ್ತರು ಹಾಗೂ ಗೊಂಚಲಿನ ಸರ್ವ ಸದಸ್ಯರು ಭಾಗವಹಿಸಿದರು. ಆಶಾ ಕಾರ್ಯಕರ್ತೆ ಭವಾನಿ ಪ್ರಾರ್ಥಿಸಿ ಅಂಗನವಾಡಿ ಕಾರ್ಯಕರ್ತೆಯರಾದ ಹೊನ್ನಮ್ಮ ಸ್ವಾಗತಿಸಿ ಕುಸುಮ ಡಿ.ಬಿ ವಂದಿಸಿ ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು .

- Advertisement -
spot_img

Latest News

error: Content is protected !!