Thursday, June 4, 2026
Homeಕರಾವಳಿಚಿಕ್ಕಮಗಳೂರಿನಲ್ಲಿ ಸರಕಾರಿ ಬಸ್‌ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ : ಅರಸಿನಮಕ್ಕಿಯ ಯುವಕ ಸಾವು

ಚಿಕ್ಕಮಗಳೂರಿನಲ್ಲಿ ಸರಕಾರಿ ಬಸ್‌ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ : ಅರಸಿನಮಕ್ಕಿಯ ಯುವಕ ಸಾವು

- Advertisement -
- Advertisement -

ಚಿಕ್ಕಮಗಳೂರು: ಸರಕಾರಿ ಬಸ್‌ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ತುಂಬೆತಡ್ಕ ನಿವಾಸಿ ಚೆನ್ನಕೇಶವ (28) ಅವರು ಮೃತಪಟ್ಟ ಘಟನೆ ಸೆ. 22ರಂದು ಸಂಭವಿಸಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಕ್ಸರೇ ಟೆಕ್ನಿಶಿಯನ್‌ ಆಗಿದ್ದ ಚೆನ್ನಕೇಶವ ಅವರು ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದು, ಅಜ್ಜಿ ಮನೆಯಾದ ಚಿಕ್ಕಮಗಳೂರಿಗೆ ಹೋಗಿದ್ದರು.

ಅಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದಕ್ಕೆ ಹೋಗುತ್ತಿದ್ದಾಗ ಅವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ ಹೊಡೆದಿದೆ.  ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!