Tuesday, May 21, 2024
Homeಕರಾವಳಿಜೆಡಿಎಸ್ ನ ಭದ್ರಕೋಟೆಯನ್ನು ಭೇದಿಸಿದ ಬಿಜೆಪಿ: ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಶಕುಂತಲಾ ಅವಿರೋಧ...

ಜೆಡಿಎಸ್ ನ ಭದ್ರಕೋಟೆಯನ್ನು ಭೇದಿಸಿದ ಬಿಜೆಪಿ: ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಶಕುಂತಲಾ ಅವಿರೋಧ ಆಯ್ಕೆ

spot_img
- Advertisement -
- Advertisement -

ಅರಸಿನಮಕ್ಕಿ: ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಅರಸಿನಮಕ್ಕಿ ಗ್ರಾಮ ಪಂಚಾಯತ್ ಈ ಬಾರಿ ಸಂಪೂರ್ಣವಾಗಿ ಬಿಜೆಪಿ ಪಾಲಾಗಿದೆ. ಹತ್ಯಡ್ಕ ಮತ್ತು ರೆಖ್ಯಾ ಗ್ರಾಮಗಳನ್ನು ಒಳಗೊಂಡ ಅರಸಿನಮಕ್ಕಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ನವೀನ್ ಕೆಲೆಂಜಿನೋಡಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶಕುಂತಲಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅರಸಿನಮಕ್ಕಿ ಗ್ರಾಮ ಪಂಚಾಯತದ ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 13 ಸ್ಥಾನಗಳನ್ನೂ ಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ ಬೆಂಬಲಿತರು ಅಧಿಕಾರದ ಗದ್ದುಗೆಗೆ ಏರಿದ್ದಾರೆ. ಅರಸಿನಮಕ್ಕಿ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಗಾದಿಗೆ ಸಾಮಾನ್ಯ ಸ್ಥಾನ ಮೀಸಲಾತಿ ನಿಗದಿಯಾಗಿದ್ದು, ರೆಖ್ಯ ವಾರ್ಡ್-1 ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಕೆ. ಎನ್. ನವೀನ್ ರವರು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಹತ್ಯಡ್ಕ ವಾರ್ಡ್-1ರಲ್ಲಿ ಹಿಂದುಳಿದ ವರ್ಗ ಎ ಮಹಿಳಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಶಕುಂತಲಾ ರವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಇಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ| ಜಯಕೀರ್ತಿ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ವೆಂಕಪ್ಪ ಗೌಡ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!