Monday, June 8, 2026
Homeಕರಾವಳಿಉಡುಪಿನೀವು ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದೀರಾ...? ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್...!

ನೀವು ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದೀರಾ…? ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್…!

- Advertisement -
- Advertisement -

ಬೆಂಗಳೂರು: ಸಾರಿಗೆ ಸಚಿವರಾದ ಬಿ. ಶ್ರೀರಾಮುಲು ವಿಧಾನಸೌಧದಲ್ಲಿ ಮಂಗಳವಾರ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡೀಸೆಲ್ ದರ ಏರಿಕೆಯಾಗಿರುವುದರಿಂದ ಹೆಚ್ಚಾಗಿರುವ ವೆಚ್ಚ, ಪ್ರಯಾಣ ದರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಆದರೆ, ಬಸ್ ಪ್ರಯಾಣ ದರ ಏರಿಕೆಯ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 9 ರಿಂದ 12 ನೇ ತರಗತಿ ಸೇರಿದಂತೆ ಆಯ್ದ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಿಸಲಾಗುತ್ತಿದೆ. ಆನ್ಲೈನ್ ನಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಡೆದುಕೊಳ್ಳಬಹುದಾಗಿದೆ. ಬಸ್ ಪಾಸ್ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಿದ್ದು, ಇದಕ್ಕೆ ತಗಲುವ ವೆಚ್ಚವನ್ನು ಪರಿಶಿಷ್ಟ ಪಂಗಡ ಸಚಿವಾಲಯದ ವತಿಯಿಂದ ಭರಿಸಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!