Friday, July 12, 2024
Homeಕರಾವಳಿಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪುರುಷೋತ್ತಮ ಬಿಳಿಮಲೆ, ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ ಅಧಿಕಾರ ಸ್ವೀಕಾರ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪುರುಷೋತ್ತಮ ಬಿಳಿಮಲೆ, ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ ಅಧಿಕಾರ ಸ್ವೀಕಾರ

spot_img
- Advertisement -
- Advertisement -

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ ಅಧಿಕಾರ ಸ್ವೀಕರಿಸಿದ್ದಾರೆ.ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪುರುಷೋತ್ತಮ ಬಿಳಿಮಲೆ ಅಧಿಕಾರ ಸ್ವೀಕರಿಸಿದರು.

ಇದೇ ವೇಳೆ ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಸದಾನಂದ ಮಾವಜಿ ಕೂಡಾ ಅಧಿಕಾರ ಸ್ವೀಕರಿಸಿದ್ದು, ಮಡಿಕೇರಿಯಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಪುರುಷೋತ್ತಮ ಬಿಳಿಮಲೆ ಸುಳ್ಯ ತಾಲೂಕಿನ ಪಂಜದವರಾಗಿದ್ದು, ಸದಾನಂದ ಮಾವಜಿ ಸುಳ್ಯ ತಾಲೂಕಿನ ಮಂಡೆಕೋಲಿನವರಾಗಿದ್ದಾರೆ.

ಮಾರ್ಚ್ ತಿಂಗಳಿನಲ್ಲೇ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಅಧ್ಯಕ್ಷರನ್ನು ನೇಮಕ ಮಾಡಿತ್ತು. ಆದರೆ ಲೋಕಸಭಾ ಚುನಾವಣಾ ನೀತಿ ಸಂಹಿತೆಯ ಕಾರಣದಿಂದ ಅಧ್ಯಕ್ಷರ ಅಧಿಕಾರ ಸ್ವೀಕಾರ ನಡೆದಿರಲಿಲ್ಲ

- Advertisement -
spot_img

Latest News

error: Content is protected !!