Wednesday, June 24, 2026
Homeಕರಾವಳಿಮಂಗಳೂರುಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪ

ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪ

- Advertisement -
- Advertisement -

ಬೆಂಗಳೂರು: ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಕಲಾಪದಲ್ಲಿ ಪ್ರಸ್ತಾಪವಾಗಿದೆ.

ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪಸಿಂಹ ನಾಯಕ್ ಪ್ರಸ್ತಾಪಿಸಿ ಅಡಿಕೆ ಬಗ್ಗೆ ಅಪಪ್ರಚಾರ ನಡೆಯುತ್ತಿದೆ,ಕೊಳೆ ರೋಗ, ಎಲೆಚುಕ್ಕಿ ರೋಗ ಮತ್ತು ಸೊರಗು ರೋಗಗಳಿಗೆ ಮದ್ದು ಕಂಡು ಹಿಡಿಯಲು ಆಗದೇ ಬವಣೆ ಎದುರಿಸುವಂತಾಗಿದ್ದು, ಕ್ಯಾನ್ಸರ್ ಕಾರಕ ಎಂಬ ವದಂತಿಯಿಂದ ನಮ್ಮ ಜನ ಆತಂಕದಲ್ಲಿದ್ದಾರೆ ಹೀಗಾಗಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸದನದಲ್ಲಿ ಉತ್ತರಿಸಿದ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಮೂವತ್ತೊಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದ್ದು, ಕೇಂದ್ರ ಸರ್ಕಾರವೂ ಸಂಶೋಧನೆ ನಡೆಸುತ್ತಿದೆ, ಸಂಶೋಧನೆ ಹೊರಬರುವ ಮೊದಲೇ ಗೊಂದಲ ಮೂಡಿಸುವುದು ಬೇಡ ಎಂದು ಹೇಳಿದ್ದಾರೆ.

ಅಲ್ಲದೇ, ದೊಡ್ಡ ಅಪಾಯ ಇಲ್ಲ ಅಂತ ಮಧ್ಯಂತರ ವರದಿಯಲ್ಲಿ ಕೊಟ್ಟಿದ್ದಾರೆ, ಪುನಃ ಕೇಂದ್ರ‌ ಸರ್ಕಾರಕ್ಕೆ ಪತ್ರ ಬರೆದು ಹತ್ತು ಸಂಶೋಧನಾ ಸಂಸ್ಥೆಗಳ ವರದಿ ಬಿಡುಗಡೆಗೆ ಒತ್ತಾಯ ಮಾಡುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ಸದನದಲ್ಲಿ ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!