Thursday, June 4, 2026
Homeಕರಾವಳಿಅಡಿಕೆ ಆರೋಗ್ಯ ವರ್ಧಕ ತೋಟಗಾರಿಕಾ ಉತ್ಪನ್ನ: ಸುಪ್ರೀಂ ಕೋರ್ಟ್ ಮುಂದೆ ಪ್ರತಿಪಾದಿಸಲು ಅಡಿಕೆ ಕಾರ್ಯಪಡೆ ಸಭೆಯಲ್ಲಿ...

ಅಡಿಕೆ ಆರೋಗ್ಯ ವರ್ಧಕ ತೋಟಗಾರಿಕಾ ಉತ್ಪನ್ನ: ಸುಪ್ರೀಂ ಕೋರ್ಟ್ ಮುಂದೆ ಪ್ರತಿಪಾದಿಸಲು ಅಡಿಕೆ ಕಾರ್ಯಪಡೆ ಸಭೆಯಲ್ಲಿ ನಿರ್ಧಾರ

- Advertisement -
- Advertisement -

ಬೆಂಗಳೂರು: ಗೃಹ ಸಚಿವ ಮತ್ತು ರಾಜ್ಯ ಅಡಿಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಆರೋಗ್ಯ ವರ್ಧಕ ತೋಟಗಾರಿಕಾ ಉತ್ಪನ್ನವೆಂದು ಸುಪ್ರೀಂ ಕೋರ್ಟ್ ಮುಂದೆ ಪ್ರತಿಪಾದಿಸುವ ಕುರಿತು ಚರ್ಚೆ ನಡೆಯಿತು.

ಇದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಮುಂದೆ ವಿಷಯ ಇದ್ದು, ಮುಂದಿನ ದಿನಗಳಲ್ಲಿ ಸಂಶೋಧನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ

ಇದೇ ವೇಳೆ ಅಡಿಕೆ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹಬ್ಬುತ್ತಿರುವ ಬಗ್ಗೆ ಕೂಡಾ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕೆಆರ್ ಎಎಂ ಅಧ್ಯಕ್ಷ ಸೊರಬದ ಮಂಜಪ್ಪ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!