Sunday, June 22, 2025
Homeಉತ್ತರ ಕನ್ನಡಕಾರವಾರ: ಗಣೇಶ ಪೂಜೆಯ  ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆ ಸಾವಿನಲ್ಲಿ ಅಂತ್ಯ

ಕಾರವಾರ: ಗಣೇಶ ಪೂಜೆಯ  ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆ ಸಾವಿನಲ್ಲಿ ಅಂತ್ಯ

spot_img
- Advertisement -
- Advertisement -

ಕಾರವಾರ: ಗಣೇಶ ಪೂಜೆಯ  ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವಿನ ಗಲಾಟೆ ಸಾವಿನಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಯಿಕಟ್ಟಾ ಬಿಂದು ಮಾಧವ ದೇವಸ್ಥಾನದ ಬಳಿ  ನಡೆದಿದೆ. .

ಸಂದೇಶ್ ಪ್ರಭಾಕರ್ ಬೋರ್ಕರ್  ಕೊಲೆಯಾದ ವ್ಯಕ್ತಿ.  ಮನೀಶ್ ಕಿರಣ್ ಬೋರ್ಕರ್ ಕೊಲೆ ಮಾಡಿದ ವ್ಯಕ್ತಿ. ಮನೀಶ್ ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರ ನನ್ನು ಆರೋಪಿ ಹತ್ಯೆಗೈದಿದ್ದಾನೆ. ಕುರಿತು ಪ್ರಕರಣ ದಾಖಲಿಸಿಕೊಂಡ ಕಾರವಾರ ನಗರ ಠಾಣಾ ಪೊಲೀಸರು ಆರೋಪಿ ಮನೀಶ್ ಕಿರಣ್​ನನ್ನು ಈಗಾಗಲೇ ಬಂಧಿಸಿದ್ದಾರೆ.

ಘಟನೆಯಲ್ಲಿ ಶರತ್ ಎಂಬಾತ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಪ್ರತೀ ವರ್ಷ ಗಣಪತಿ ಹಬ್ಬದಂದು ಶಿರಸಿಯಿಂದ ಬರುವ ಕುಟುಂಬಸ್ಥರು ಕಾರವಾರದಲ್ಲಿ ಎಲ್ಲರೂ ಸೇರಿ ಗಣೇಶನ ಹಬ್ಬ ಮಾಡ್ತಿದ್ರು. ಪ್ರಭಾಕರ್ ಎಂಬವರು ಕಳೆದ ವರ್ಷದ ಹಣದ ಲೆಕ್ಕ ನೀಡಿಲ್ಲ ಎಂದು ಕುಟುಂಬಸ್ಥರು ಗಲಾಟೆ ಎಬ್ಬಿಸಿದರು. ಈ ವೇಳೆ ಪ್ರಭಾಕರ್ ಮಕ್ಕಳಾದ ಸಂದೇಶ ಹಾಗೂ ಶರತ್ ಸಹಾಯಕ್ಕೆ ಬಂದಿದ್ರು. ಇದನ್ನು ನೋಡಿ ಪ್ರಭಾಕರ್ ತಂಗಿ ಮಕ್ಕಳಾದ ಕಿರಣ್, ಪ್ರಶಾಂತ್, ರತನ್, ಮನೀಶ್ ಗಲಾಟೆ ಮಾಡಿದ್ದಾರೆ. ಗಲಾಟೆ ವೇಳೆ ಕೈಕೈ ಮಿಲಾಯಿಸಿದ್ದಾರೆ. ಈ ವೇಳೆ ಉಳಿದವರು ಸಂದೇಶನನ್ನು ಕೆಳಗೆ ಬೀಳಿಸಿದ್ರೆ, ಮನೀಶ್ ಚಾಕು ಹಿಡಿದು ಹೊಟ್ಟೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಸಂದೇಶ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!