- Advertisement -
![]()
- Advertisement -
ಪುತ್ತೂರಿನಲ್ಲಿ ಪೊಲೀಸರಿಂದ ಗಂಭೀರವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ಬಿಜೆಪಿ ಕಾರ್ಯಕರ್ತರನ್ನು ಇಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ರು. ಈ ವೇಳೆ ಅರುಣ್ ಕುಮಾರ್ ಪುತ್ತಿಲ ಪರ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹೊಯ್ ಕೈ ನಡೆದಿದೆ ಎನ್ನಲಾಗಿದೆ.
ಆಸ್ಪತ್ರೆಗೆ ಯತ್ನಾಳ್ ಬರುತ್ತಿದ್ದಂತೆ ಹಿಂದೂಪರ ಹಾಗೂ ಬಿಜೆಪಿ ಕಾರ್ಯಕರ್ತರನ್ನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪರ ಕಾರ್ಯಕರ್ತರು ತಳ್ಳಿದ್ದಾರೆ ಎನ್ನಲಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎದುರಲ್ಲೇ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೇ, ಆಸ್ಪತ್ರೆಯ ಒಳಗೆ ಹೋಗದಂತೆ ಬಿಜೆಪಿ ಕಾರ್ಯಕರ್ತರನ್ನ ದೂರ ಇರುವಂತೆ ಪುತ್ತಿಲ ಕಾರ್ಯಕರ್ತರು
- Advertisement -


