Thursday, June 4, 2026
Homeಕರಾವಳಿಬಂಟ್ವಾಳ; ಬಾವಿಗೆ ಹಾರಿ ಯುವ ಆರ್ಟಿಸ್ಟ್ ಆತ್ಮಹತ್ಯೆ

ಬಂಟ್ವಾಳ; ಬಾವಿಗೆ ಹಾರಿ ಯುವ ಆರ್ಟಿಸ್ಟ್ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ; ಬಾವಿಗೆ ಹಾರಿ ಯುವ ಆರ್ಟಿಸ್ಟ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.

ಸಾಗರ್ ಆಚಾರ್ಯ (26) ಆತ್ಮಹತ್ಯೆ ಮಾಡಿಕೊಂಡವರು. ಸಾಗರ್ ಇಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ಮನೆಯಂಗಳದಲ್ಲಿದ್ದ 30 ಅಡಿ ಆಳದ ಬಾವಿಗೆ ಹಾರಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅದರಿಂದಲೇ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ.

ಸುಮಾರು 30 ಅಡಿ ಆಳದಲ್ಲಿರುವ ಬಾವಿಯಿಂದ ಸಾಗರ್ ಅವರ ಮೃತದೇಹವನ್ನು ಬಂಟ್ವಾಳ ಅಗ್ನಿಶಾಮಕ ದಳದವರು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಸಾಗರ್ ಮೃತ ದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಬಂಟ್ವಾಳದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!