- Advertisement -
- Advertisement -
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಗಳು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆಂದು ವರದಿಯಾಗಿದೆ . ಕುಲ್ಗಾಂ ಜಿಲ್ಲೆಯ ವನ್ಪೋರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಸ್ಪಷ್ಟ ಮಾಹಿತಿ ಲಭ್ಯವಾಗುತ್ತಲೇ ಇಂದು ಬೆಳಿಗ್ಗೆ ಸೇನಾಪಡೆ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾಪಡೆಗಳು ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ .
- Advertisement -