Saturday, May 18, 2024
Homeಇತರಸೇನಾ ಹೆಲಿಕಾಪ್ಟರ್ ಪತನ- ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್...

ಸೇನಾ ಹೆಲಿಕಾಪ್ಟರ್ ಪತನ- ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ…!

spot_img
- Advertisement -
- Advertisement -

ಬೆಂಗಳೂರು: ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ 14 ಮಂದಿಯನ್ನು ಕರೆದೊಯ್ಯುತ್ತಿದ್ದಂತ ಮಿಗ್-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಡಿಸೆಂಬರ್ 8ರಂದು ಪತನಗೊಂಡಿತ್ತು. ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 11 ಮಂದಿ ವಿಧಿವಶರಾಗಿದ್ದರು.

ಈ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು, ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿರೋದಾಗಿ ಐಎಎಫ್ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ತಿಳಿಸಿದೆ.

- Advertisement -
spot_img

Latest News

error: Content is protected !!