Thursday, June 25, 2026
Homeತಾಜಾ ಸುದ್ದಿಜಮ್ಮು ಮತ್ತು ಕಾಶ್ಮೀರದ ಜಿಲ್ಲೆಯೊಂದರಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ ; ಮೂವರು ಯೋಧರು ಸಾವು

ಜಮ್ಮು ಮತ್ತು ಕಾಶ್ಮೀರದ ಜಿಲ್ಲೆಯೊಂದರಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ ; ಮೂವರು ಯೋಧರು ಸಾವು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ರಾಮ್‌ಬನ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಸುಮಾರು 700 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು, ಮೂವರು ಯೋಧರು ಮೃತಪಟ್ಟ ಘಟನೆ ಭಾನುವಾರದಂದು ಸಂಭವಿಸಿದೆ.

ಮೃತರನ್ನು ಯೋಧರಾದ ಅಮಿತ್ ಕುಮಾರ್, ಸುಜಿತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ಭಾನುವಾರ ಬೆಳಿಗ್ಗೆ ಸುಮಾರು 10:30ರಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ತಕ್ಷಣವೇ ಸೇನೆ, ಪೊಲೀಸರು, ಎಸ್‌ಡಿಆರ್‌ಎಫ್ ಹಾಗೂ ಸ್ಥಳೀಯರು ಸೇರಿ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಆದರೆ ಮೂವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!