Wednesday, June 3, 2026
Homeತಾಜಾ ಸುದ್ದಿಆತ್ಮಹತ್ಯೆಗೆ ಪ್ರಚೋದನೆ ಆರೋಪ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅರೆಸ್ಟ್

ಆತ್ಮಹತ್ಯೆಗೆ ಪ್ರಚೋದನೆ ಆರೋಪ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅರೆಸ್ಟ್

- Advertisement -
- Advertisement -

ಮುಂಬೈ: ರಿಪಬ್ಲಿಕ್ ಟಿವಿಯ ಂಸಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಬೆಳ್ಳಂಬೆಳಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸದ್ದಾರೆ. ಇನ್ನು ಪೊಲೀಸರು ಅರ್ನಬ್ ಗೋಸ್ವಾಮಿ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ ಅಂತಾ ಹೇಳಲಾಗುತ್ತಿದೆ.

2018ರ ಆತ್ಮಹತ್ಯೆಗೆ ಕುಮ್ಮಕ್ಕು ಆರೋಪ ಪ್ರಕರಣವೊಂದನ್ನು ರಿ ಓಪನ್ ಮಾಡಿರುವ ಪೊಲೀಸರು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಅವರನ್ನು ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಮುಂಬೈ ಪೊಲೀಸ್, ಬಾಲಿವುಡ್ ಮತ್ತು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅರ್ನಬ್ ನಿರಂತರ ವರದಿಗಳನ್ನು ಬಿತ್ತರಿಸಿದ್ದರು. ಈ ಸಂಬಂಧ ಅರ್ನಬ್ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿದ್ದವು. ಜತೆಗೆ ನಕಲಿ ಟಿಆರ್‌ಪಿ ಹಗರಣದಲ್ಲಿಯೂ ಅವರ ಹೆಸರು ಕೇಳಿಬಂದಿತ್ತು.

- Advertisement -

Latest News

error: Content is protected !!